ಮಾರ್ಚ್ 21ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ

ಉಡುಪಿ : 2025‌ನೇ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4‌ರ ವರೆಗೆ ಜಿಲ್ಲೆಯಲ್ಲಿ ನಿಗದಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ, ಫ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸ್ಪರೆಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿರುತ್ತದೆ ಎಂದು ತಿಳಿಸಿದರು.

Related posts

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ – ಹೆಚ್ ಡುಂಡಿರಾಜ್​

ಬೈಕ್‌ನಲ್ಲಿ ಬಂದು ಮಹಿಳೆಯ ಸರ ಎಗರಿಸಿದ ಕಳ್ಳನ ಬಂಧನ