ಕರ್ತವ್ಯ ಲೋಪದ ಆರೋಪ – ಜೈಲು ಅಧೀಕ್ಷಕ ಅಮಾನತು

ಮಂಗಳೂರು : ನಗರದ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ದಾಳಿ ನಡೆಸಿದ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದಲ್ಲಿ ಜೈಲು ಅಧೀಕ್ಷಕ ಬಿ.ಟಿ. ಓಬಳೇಶಪ್ಪರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶದ ತನಕ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ