ಧರ್ಮದ್ವೇಷ ಭಾಷಣ ಆರೋಪ – ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಪ್ರಕರಣ

ಮಂಗಳೂರು : ಧರ್ಮದ್ವೇಷದ ಭಾಷಣ ಮಾಡಿರುವ ಆರೋಪದ ಮೇಲೆ ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ಹಿಂದುಗಳು, ಹಿಂದು ಮಾಲಕತ್ವದ ಸಭಾಂಗಣದಲ್ಲಿಯೇ ಮದುವೆಯಾಗಬೇಕು. ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆಯಾಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು. ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ.” ಎಂದು ಕಾರ್ಯಕ್ರಮವೊಂದರಲ್ಲಿ ಡಾ.ಅರುಣ್ ಉಳ್ಳಾಲ್ ಮಾತನಾಡಿ ದ್ವೇಷಭಾಷಣ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದೀಗ ಧರ್ಮ ದ್ವೇಷದ ಭಾಷಣ ಮಾಡಿದ ಆರೋಪದಲ್ಲಿ ಡಾ.ಅರುಣ್ ಉಳ್ಳಾಲ್ ಮೇಲೆ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ