ಯುವತಿಯ ಅತ್ಯಾಚಾರ ಆರೋಪ : ಯುವಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಅತ್ಯಾಚಾರವೆಸಗಿರುವ ಘಟನೆಯ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರುವ ತಾನು ಬಿಕರ್ನಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿದ್ದಾಗ ವಿನೋದ್‌ರಾಜ್ ಎಂಬಾತನ ಸ್ನೇಹವಾಗಿತ್ತು. ಮಾ.23ರಂದು ತಾನು ಮನೆಯಲ್ಲೇ ಇದ್ದಾಗ ಅಲ್ಲಿಗೆ ಬಂದ ಆರೋಪಿಯು ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಬಳಿಕವೂ ಪದೇ ಪದೇ ಅತ್ಯಾಚಾರವೆಸಗಿದ್ದಾನೆ. ನಂತರ ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯು ಮಹಿಳಾ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ