ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ – ಕ್ರಮಕ್ಕೆ ಒತ್ತಾಯಿಸಿ ಮನವಿ

ಉಡುಪಿ : ಕೇಂದ್ರ ಸಂಪುಟ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹಾಗೂ ಅತ್ಯಂತ ಕೀಳು ಮಟ್ಟದ ಪದ ಬಳಸಿರುವ ಲೋಕಾಯುಕ್ತ ಎಡಿಜಿಪಿ ಎಂ ಚಂದ್ರಶೇಖರ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಉಡುಪಿ ಜಿಲ್ಲಾ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವರಾವ್‌, ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ ಹೆಜಮಾಡಿ, ಜಿಲ್ಲಾ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಕಾರ್ಕಳ ಬ್ಲಾಕ್ ಅಧ್ಯಕ್ಷರು ಶ್ರೀಕಾಂತ್ ಹೆಬ್ರಿ, ಕಾಪು ಬ್ಲಾಕ್ ಅಧ್ಯಕ್ಷರು ದೇವರಾಜ್ ತೊಟ್ಟಂ, ವೆಂಕಟೇಶ್ ಎಂ ಟಿ, ಬಿಕೆ ಮೊಹಮ್ಮದ್, ಅಶ್ರಫ್ ಪಡುಬಿದ್ರಿ, ರಂಗ ಕೋಟ್ಯಾನ್, ಇಸ್ಮಾಯಿಲ್ ಹೆಜಮಾಡಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ