ಮಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪರಿಷತ್ ಕಲಾಪದ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳೂರು ಮಿನಿ ವಿಧಾನಸಭಾ ಮುಂಭಾಗ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಸಿ.ಟಿ. ರವಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಬೆನ್ನಲ್ಲೇ ಏಕಾಏಕಿ ರಸ್ತೆಗಳಿದ ಕಾಂಗ್ರೆಸ್ ಕಾರ್ಯಕರ್ತರು ಕೆಲಹೊತ್ತು ರಸ್ತೆ ತಡೆ ನಡೆಸಿದರು. ತಕ್ಷಣ ಮಧ್ಯಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ರಸ್ತೆ ತಡೆ ನಡೆಸದಂತೆ ತಡೆದರು. ಬಳಿಕ ವಾಹನಗಳು ಸರಾಗವಾಗಿ ಸಂಚಾರ ನಡೆಸಿತು.