ಬಿಜೆಪಿಯವರು ಮತ್ತು ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡಿ – ಸೊರಕೆ ಸವಾಲು

ಉಡುಪಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300 ರಿಂದ 240ಕ್ಕೆ ಇಳಿದಿದೆ. ಜನರಿಂದ ಆಯ್ಕೆಯಾದ ಸರ್ಕಾರವನ್ನು ವಿಶ್ವ ಗುರು ಶಿಥಿಲ ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡುವ ಪಿತೂರಿಯನ್ನು ಬಿಜೆಪಿ ಮಾಡುತ್ತಿದೆ. ಸಿದ್ದರಾಮಯ್ಯ ಹಿಂದುಳಿದ ಸಮಾಜದ ನಾಯಕ. ಹಿಂದುಳಿದ, ಶೋಷಿತ, ಅಲ್ಪ ಸಂಖ್ಯಾತರು ಸಿದ್ದರಾಮಯ್ಯ ಹಿಂದೆ ಇದ್ದಾರೆ. ಸಿದ್ದರಾಮಯ್ಯ ಮೇಲೆ ಯಾವುದೇ ತಂತ್ರಗಾರಿಕೆ ನಡೆಯಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಬಿಜೆಪಿಯವರು ಮತ್ತು ಕುಮಾರಸ್ವಾಮಿ ವಿರುದ್ಧ ಅಭಿ‌ಯೋಜನೆಗೆ ಅನುಮತಿ ನೀಡಲಿ ನೋಡೋಣ. ಪರಶುರಾಮ ಥೀಮ್ ಪಾರ್ಕ್ ಹೆಸರಿನಲ್ಲಿ ಅಕ್ರಮ ಎಸಗಿದ ಮಾಜಿ ಸಚಿವ ಸುನಿಲ್ ಕುಮಾರ್ ವಿರುದ್ಧ ತನಿಖೆ ಮಾಡಿ. ಅದು ಬಿಟ್ಟು ನಿಮಗೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಡಲು ನೈತಿಕ ಹಕ್ಕು ಇಲ್ಲ ಎಂದು ಸೊರಕೆ ಗುಡುಗಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ