ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ : ಟೈಲರಿಂಗ್ ಉದ್ಯಮಕ್ಕೆ ಸಾಕಷ್ಟು ಬೇಡಿಕೆಯಿದ್ದು ಮಹಿಳೆಯರು ತರಬೇತಿಯನ್ನು ಪಡೆದು ಸ್ವ-ಉದ್ಯೋಗದತ್ತ ಗಮನ ಹರಿಸುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಲಹೆ ನೀಡಿದ್ದಾರೆ. ಮಂಗಳವಾರ ತಾಲೂಕು ಆಡಳಿತ ಸೌಧದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

Read more

‘ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣ – ಪಂಪ ಭಾರತ ಇಂಗ್ಲಿಷ್ ಭಾಷೆಗೆ ಅನುವಾದವಾಗಿರುವುದು ಜಾಗತಿಕ ವಿದ್ಯಾಮಾನ : ಡಾ. ಬಿ.ಎ. ವಿವೇಕ ರೈ

ಉಡುಪಿ : ಪಂಪ ಭಾರತ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಆಗಿರುವುದು ಜಾಗತಿಕ ವಿದ್ಯಾಮಾನವಾಗಿದೆ. ಇದನ್ನು ನಾವೆಲ್ಲ ಸಂಭ್ರಮಿಸಬೇಕಾಗಿದೆ. ಕನ್ನಡ ಮೊದಲ ಕಾವ್ಯ ಪಂಪ ಭಾರತ ಜಗತ್ತಿನ ಯಾವುದೇ ಭಾಷೆಗೂ ಅನುವಾದ ಆಗಿಲ್ಲ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ…

Read more

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್‌ರಿಂದ ಕ್ಯೂ ಕಾಂಪ್ಲೆಕ್ಸ್ ಲೋಕಾರ್ಪಣೆ

ಬೆಳ್ತಂಗಡಿ : ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕ್ಯೂ ಕಾಂಪ್ಲೆಕ್ಸ್ ಅನ್ನು ಲೋಕಾರ್ಪಣೆಗೊಳಿಸಿದರು. ಪತ್ನಿ ಡಾ. ಸುದೇಶ್ ಧನ್‌ಕರ್ ಅವರೊಂದಿಗೆ ಆಗಮಿಸಿದ ಉಪರಾಷ್ಟ್ರಪತಿಯವರು ಮೊದಲಿಗೆ ಕ್ಷೇತ್ರಕ್ಕೆ ತೆರಳಿ ಶ್ರೀಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ನಂತರ ಸಾನ್ನಿಧ್ಯ ಕ್ಯೂ…

Read more

ಕೃಷ್ಣಮಠದಲ್ಲಿ ಪಿಕ್ ಪಾಕೆಟ್ ಮಾಡುವವರ ಹಾವಳಿ – ಒಂದೇ ತಿಂಗಳಲ್ಲಿ ಹಲವು ಪ್ರಕರಣ

ಉಡುಪಿ : ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ. ಸಾವಿರಾರು ಜನ ಓಡಾಡುವ…

Read more

ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ

ಮಂಗಳೂರು : “ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲಾಗುವುದು” ಎಂದು ದೇವಳದ ಮೆನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ…

Read more

ರಿವಾಲ್ವರ್ ಮಿಸ್ ಫೈರ್ – ಯುವಕನಿಗೆ ಗಾಯ

ಮಂಗಳೂರು : ನಗರದ ಹೊರವಲಯದ ವಾಮಂಜೂರು ಸೆಕೆಂಡ್ ಹ್ಯಾಂಡ್ ಬಜಾರ್‌ನಲ್ಲಿ ರಿವಾಲ್ವರ್ ಮಿಸ್‌ಫೈರ್ ಆಗಿ ಯುವಕನೋರ್ವನು ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಸಫ್ವಾನ್ ಎಂಬಾತ ಗಾಯಾಳು ಯುವಕ. ಸೆಕೆಂಡ್ ಹ್ಯಾಂಡ್ ಬಜಾರ್‌ಗೆ ವಸ್ತುಗಳ ಖರೀದಿಗೆ ಸಫ್ವಾನ್ ಆಗಮಿಸಿದ್ದ. ಈ ವೇಳೆ ಟೇಬಲ್‌ನಲ್ಲಿ…

Read more

ಕಿಕ್ಕಿರಿದ ಪ್ರೇಕ್ಷಕರಿಂದ ಸಂಪನ್ನ “ಅಲನಿ ಮೆಲೊಡಿ ನೈಟ್”

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277ನೇ ಹಾಗೂ 24‌ನೇ ವರ್ಷದ ಮೊದಲ ಕಾರ್ಯಕ್ರಮ ಜನವರಿ 05‌ರಂದು ಶಕ್ತಿನಗರದ ಕಲಾಂಗಣದಲ್ಲಿ ನಡೆಯಿತು. ಬಯಲು ರಂಗ ಮಂದಿರವು ಪ್ರೇಕ್ಷಕರಿಂದ ತುಂಬಿ ತುಳುಕಿದ್ದು, ಒಂಬತ್ತರ ಹರಯದ ಬಾಲೆ ಅಲನಿ ಡಿಸೋಜ ಈ…

Read more

ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

ಮಣಿಪಾಲ : ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.…

Read more

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್

ಮಂಗಳೂರು : ದ.ಕ.ಜಿಲ್ಲಾ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳವಾರ ಬೆಳಗ್ಗೆ ದೆಹಲಿಯಿಂದ ಪತ್ನಿ‌ ಸಹಿತರಾಗಿ ಹೊರಟ ಅವರು ಮಧ್ಯಾಹ್ನ 1.05ಕ್ಕೆ ಮಂಗಳೂರು ವಿಮಾನ ನಿಲ್ದಾಣ…

Read more

ಅಪರಿಚಿತ ವ್ಯಕ್ತಿ ಮೃತ್ಯು : ಸಂಬಂಧಿಕರಿಗೆ ಸೂಚನೆ

ಉಡುಪಿ : ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು. ‌‌‌ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ…

Read more