ಸಾವಿನಲ್ಲೂ ಒಂದಾದ ಕೋಟದ ಹಿರಿಯ ದಂಪತಿ

ಕೋಟ : ಹಿರಿಯ ದಂಪತಿ ಸಾವಿನಲ್ಲೂ ಒಂದಾದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಧರ್ಮಪತ್ನಿ ಮುತ್ತು ಪೂಜಾರ್ತಿ(53) ಸಾವಿನಲ್ಲಿ ಒಂದಾದವರು.

ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆ, ಕೃಷಿರಾಗಿ ಗುರುತಿಸಿಕೊಂಡಿದ್ದರು. ಅವರ ಪತ್ನಿ ಮುತ್ತು ಪೂಜಾರ್ತಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿಯಾಗಿದ್ದವರು. ಕೃಷ್ಣ ಪೂಜಾರಿ ಅವರ ಪತ್ನಿ ಮುತ್ತು ಪೂಜಾರ್ತಿ ಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮುತ್ತು ಪೂಜಾರ್ತಿಯವರ ಅಂತ್ಯಕ್ರಿಯೆ ಮುಗಿಸಿ ವಾಪಾಸು ಬರುತ್ತಿದ್ದ ವೇಳೆ ಪತ್ನಿ ಕಳೆದುಕೊಂಡಿದ್ದ ಶಾಕ್‌ನಲ್ಲಿದ್ದ ಅವರ ಪತಿ ಕೃಷ್ಣ ಪೂಜಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ದಂಪತಿ ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!