ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಲೆಕ್ಟ್ರಿಷಿಯನ್

ಮಣಿಪಾಲ : ಜೀವನದಲ್ಲಿ ಜಿಗುಪ್ಸೆಗೊಂಡ ಇಲೆಕ್ಟ್ರಿಶಿಯನ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ.

ಕಂಚಿನಬೈಲು ನಿವಾಸಿ ಸುರೇಶ್ ಮೃತ ದುರ್ದೈವಿ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ ಹೋಗಿದ್ದು, ನಂತರ ನಾಪತ್ತೆಯಾಗಿದ್ದ ಸುರೇಶ್‌ಗೆ ಹುಡುಕಾಟ ನಡೆಸಿದಾಗ ಡಿ.1ರಂದು ಮನೆ ಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ್ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಶವವನ್ನು ವೈದ್ಯಕೀಯ‌ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ