ರೈಲಿನಿಂದ ಬಿದ್ದು ಅಪರಿಚಿತ ಮಹಿಳೆ ಸಾವು

ಕಾಪು‌ : ಉದ್ಯಾವರ ಪಾಪನಾಶಿನಿ ಹೊಳೆಯ ರೈಲ್ವೇ ಟ್ರ್ಯಾಕ್‌ನ ಕಂಬದ ನಡುವೆ ರೈಲಿನಿಂದ ಬಿದ್ದು ಅಪರಿಚಿತ ಮಹಿಳೆಯೋರ್ವಳು ಮೃತ ಪಟ್ಟ ಘಟನೆ ಸಂಭವಿಸಿದೆ.

ಮಹಿಳೆಯ ಮೃತ ದೇಹ ಸಂಪೂರ್ಣ ನಜ್ಜುಗುಜ್ಜಾಗಿದ್ದು ಢಿಕ್ಕಿಯ ರಭಸಕ್ಕೆ ರೈಲ್ವೇ ಟ್ರ್ಯಾಕ್ ಮತ್ತು ಹೊಳೆಗೆ ಹಾಕಿರುವ ಬೃಹತ್ ಕಂಬದ ಬೀಮ್‌ನೊಳಗೆ ಹೋಗಿ ಬಿದ್ದಿದೆ.

ಸಂಪೂರ್ಣ ಅಪ್ಪಚ್ಚಿಯಾಗಿದ್ದ ಮಹಿಳೆಯ ಮೃತದೇಹವನ್ನು ಕಾಪು ಪೊಲೀಸರು ಮತ್ತು ರೈಲ್ವೇ ಪೊಲೀಸರ ಉಪಸ್ಥಿತಿಯಲ್ಲಿ ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬುಲೆನ್ಸ್ ಸಿಬಂದಿ ನಾಗರಾಜ್ ನೇತೃತ್ವದಲ್ಲಿ ಮೇಲಕ್ಕೆತ್ತಿ, ಉಡುಪಿ ಅಜ್ಜರಕಾಡು ಶವಾಗಾರಕ್ಕೆ ಸಾಗಿಸಿದರು.

ಕಾಪು ಎಸ್ಸೈ ಅಬ್ದುಲ್ ಖಾದರ್ ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ