ಪತಿಯ ಅಗಲಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

ಕಾರ್ಕಳ : ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ನೊಂದಿದ್ದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಸಂಭವಿಸಿದೆ.

ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ (39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !