ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ : ಅಧಿಕಾರಿಗಳಿಂದ ದಾಳಿ,ಅಕ್ಕಿ ವಶ

ಬೈಂದೂರು : ಗೂಡ್ಸ್‌ ವಾಹನದಲ್ಲಿ ಕಾನೂನು ಬಾಹಿರವಾಗಿ ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುತ್ತಿರುವುದನ್ನು ತಡೆದ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದ ಘಟನೆ ಗಂಗೊಳ್ಳಿ ಬಳಿ ನಡೆದಿದೆ.

ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪದ ನಾಯಕವಾಡಿ ಕಡೆಯಿಂದ ಮುಳ್ಳಿಕಟ್ಟೆ ಕಡೆಗೆ ಗಂಗೊಳ್ಳಿ-ಮುಳ್ಳಿಕಟ್ಟೆ ರಸ್ತೆಯಲ್ಲಿ ಗೂಡ್ಸ್‌ ವಾಹನದಲ್ಲಿ ಕಾನೂನು ಬಾಹಿರವಾಗಿ ಅಕ್ಕಿ ಸಾಗಿಸುತ್ತಿರುವುದು ಆಹಾರ ನಿರೀಕ್ಷಕ ಸುರೇಶ ಎಚ್‌.ಎಸ್‌. ಅವರ ಗಮನಕ್ಕೆ ಬಂದಿದೆ. ಬಳಿಕ ಗಂಗೊಳ್ಳಿ ಗುಜ್ಜಾಡಿ ಗ್ರಾಮದ ಮಂಕಿ ಕ್ರಾಸ್‌ ಬಳಿ ವಾಹನ ನಿಲ್ಲಿಸಿದಾಗ 24 ಪಾಲಿಥಿನ್‌ ಚೀಲಗಳಲ್ಲಿ ಕುಚ್ಚಲಕ್ಕಿ ಹಾಗೂ 4 ಪಾಲಿಥಿನ್‌ ಚೀಲಗಳಲ್ಲಿ ಬೆಳ್ತಿಗೆ ಅಕ್ಕಿ ಕಂಡುಬಂತು. ಒಟ್ಟು 1,390 ಕೆ.ಜಿ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ಹೆಚ್ಚಿನ ಬೆಲೆಗೆ ಅಂಗಡಿಗಳಿಗೆ ಮಾರಾಟ ಮಾಡಲು ತರಲಾಗುತ್ತಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಸದ್ಯ ಅಧಿಕಾರಿಗಳು ಅಕ್ಕಿ ವಶಪಡಿಸಿಕೊಂಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ