ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನ ಬಂಧನ

ಉಡುಪಿ : ಜಿಲ್ಲೆಯಲ್ಲಿ ಶುಕ್ರವಾರದಂದು ಮತ್ತೋರ್ವ ಅಕ್ರಮ ಬಾಂಗ್ಲಾ ವಲಸಿಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತೆಕಟ್ಟೆಯಲ್ಲಿ ಓರ್ವನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮೊದಲು ಮಲ್ಪೆ ಪೊಲೀಸರು ಏಳು ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದರು. ಮಲ್ಪೆ ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಎರಡು ದಿನಗಳ ಬಳಿಕ ಕಾರ್ಕಳದಲ್ಲಿ ಮತ್ತಿಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಇಂದು ಬಂಧನಕ್ಕೊಳಗಾದ ಮಹಮ್ಮದ್ ಜಹಾಂಗೀರ್ ಆಲಂ (24)ನನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದಾಗಿ ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ