ರೈತ ವಿರೋಧಿ ಕೇಂದ್ರ ಬಜೆಟ್; ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.

ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

Related posts

60 ಲಕ್ಷ ವೆಚ್ಚದಲ್ಲಿ ಹೆರ್ಗ ಮಾರುತಿ ನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರೊಂದಿಗೆ ರಂಗಾಸಕ್ತರ ಸಂವಾದ