ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದಿಂದ ಮನವಿ

ಮಣಿಪಾಲ : ಉಡುಪಿ ಜಿಲ್ಲೆಯ ಸುಗಮ್ಯ ಜಿಲ್ಲಾ ಮಹಿಳಾ ಒಕ್ಕೂಟದ ವತಿಯಿಂದ ಕೊಲ್ಕತ್ತಾ ಹಾಗೂ ದೇಶದಾದ್ಯಂತ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ದೇಶದಾದ್ಯಂತ ಇಂತಹ ಘಟನೆಗಳು ಪದೇಪದೇ ನಡೆಯುತ್ತಿದ್ದು ಸ್ತೀಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ, ಭದ್ರತೆ ದೊರೆಯುವಂತೆ ಮಾಡಲು ಕಠಿಣ ಕ್ರಮಗಳನ್ನು ಕೈಗೊಳ್ಳಲು ಕಾನೂನನ್ನು ರಚಿಸಿ ಅನುಷ್ಠಾನ ಗೊಳಿಸಲು ಒತ್ತಾಯಿಸಿ ಒಕ್ಕೂಟದ 6 ಸಾವಿರದಷ್ಟು ಸದಸ್ಯರ ಸಹಿಯನ್ನೊಳಗೊಂಡ ಮನವಿಯನ್ನು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಗೆ ಅವರಿಗೆ ನೀಡಲಾಯಿತು.

ಮಾನಿನಿ ರಾಜ್ಯ ಮಹಿಳಾ ಒಕ್ಕೂಟದ ಪ್ರತಿನಿಧಿ ಜೆನೆಟ್ ಬರ್ಬೋಜಾ ಮುಂದಾಳುತ್ವದಲ್ಲಿ ಈ ಮನವಿಯನ್ನು ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಗ್ರೇಸಿ ಕುವೆಲ್ಲೊ ಕಾರ್ಯದರ್ಶಿ ಪ್ಲೇವಿಯಾ ಡಿಸೋಜ, ಉಪಾಧ್ಯಕ್ಷರಾದ ಅನ್ಸಿಲ್ಲಾ ಲೂವಿಸ್, ಕೋಶಾಧಿಕಾರಿ ಸಿಂತಿಯಾ ಡಿಸೋಜಾ, ಸಹಕಾರ್ಯದರ್ಶಿ ಫ್ಲೋರಿನ್ ಮೆಂಡೊನ್ಸಾ, ಮರಿನಾ ಲೂವಿಸ್ ಮತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ