ಭಾನುವಾರದ ಸಂತೆ ವ್ಯಾಪಾರಿಗಳಿಗೆ ಐಡಿ ಕಾರ್ಡ್, ಪ್ರಮಾಣ ಪತ್ರ ನೀಡಲು ಜಿಲ್ಲಾಧಿಕಾರಿಗಳಿಗೆ ಮನವಿ

ಮಂಗಳೂರು : ಕಳೆದ ಹಲವು ವರ್ಷಗಳಿಂದ ನಗರದ ಪುರಭವನದ ಬಳಿ ಸಂತೆ ವ್ಯಾಪಾರ ಮಾಡುತ್ತಿರುವ ಬಡ ಬೀದಿಬದಿ ವ್ಯಾಪಾರಿಗಳನ್ನು 667ರ ಪಟ್ಟಿಯಿಂದ ಕೈಬಿಟ್ಟು ಅನ್ಯಾಯ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನಿಯೋಗವು ಮಾನ್ಯ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ವಾರದ ಸಂತೆ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಐಡಿ ಕಾರ್ಡ್, ಪ್ರಮಾಣ ಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ ಸಂತೋಷ್ ಕುಮಾರ್ ಅವರು ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ನಿಯೋಗದಲ್ಲಿಸಂಘದ ಗೌರವಾಧ್ಯಕ್ಷರಾದ ಬಿಕೆ ಇಮ್ತಿಯಾಜ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್ ಎಸ್, ಉಪಾಧ್ಯಕ್ಷರಾದ ವಿಜಯ್, ಸಿಕಂದರ್, ವಾರದ ಸಂತೆ ವಿಭಾಗ ಸಮಿತಿಯ ಶಿವಾನಂದ, ಮಂಜುನಾಥ, ಗದಿಗಪ್ಪ, ಷರೀಫ್ ಸಾಬ್, ಕಳಕಪ್ಪ, ಸಿದ್ದಪ್ಪ, ಬಶೀರ್ ಸಾಬ್ ಉಪಸ್ಥಿತರಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ