ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಬೆಂಬಲ ಕೋರಿ ಶಾಸಕರಿಗೆ ಮನವಿ

ಮಂಗಳೂರು : ವಕೀಲರ ಸಂಘದ ವತಿಯಿಂದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್ ಅವರನ್ನು ಭೇಟಿಯಾಗಿ ಬೆಂಬಲವನ್ನು ಕೋರಿ ಮನವಿಯನ್ನು ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀ ವೇದವ್ಯಾಸ ಕಾಮತ್‌ರವರು ಪೂರ್ಣ ಬೆಂಬಲವನ್ನು ಸೂಚಿಸಿದಲ್ಲದೆ. ಮುಂದಿನ ಅಧಿವೇಶನದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠದ ಬಗ್ಗೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು, ಹಾಗೂ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ಸಂಘದ ಮುಂದಿನ ಹೋರಾಟಕ್ಕೆ ಪೂರ್ಣ ಬೆಂಬಲವನ್ನು ಸೂಚಿಸಿದರು.

ಮಂಗಳೂರು ವಕೀಲ ಸಂಘದ ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಎಚ್ ವಿ., ಸಂಘದ ಮಾಜಿ ಕೋಶಾಧಿಕಾರಿ ಶ್ರೀ ವಿನಯಕುಮಾರ್, ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಗದೀಶ್, ಶ್ರೀ ಜಾಕಿರ್ ಹುಸೈನ್, ಶ್ರೀ ಪ್ರಸಾದ್ ಉಪಸ್ಥಿತರಿದ್ದರು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar