ಬೈಂದೂರಿನಲ್ಲಿ ವಿಮಾನ ನಿಲ್ದಾಣ ಮಂಜೂರಾತಿಗೆ ಕೇಂದ್ರ ವಿಮಾನಯಾನ ಸಚಿವರಿಗೆ ಮನವಿ

ಉಡುಪಿ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಮಂಜೂರು ಮಾಡಲು ಕೇಂದ್ರ ವಿಮಾನಯಾನ ಸಚಿವರಾದ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಸಂಸದ ಬಿ.ವೈ ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದ್ದು ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾಧಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡುವಂತೆ ಸಂಸದರು ಮನವಿ ಮಾಡಿದರು.

ಮನವಿಯ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು