ಮಂಗಳೂರು ಆಕಾಶವಾಣಿಯಲ್ಲಿ ಉದ್ಘೋಷಕ/ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಘೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.

ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು ಹಾಗೂ 50 ವರ್ಷ ವಯಸ್ಸಿನೊಳಗಿನವರಾಗಿರಬೇಕು. ಈ ಕುರಿತು ದಾಖಲೆಗಳ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ತಾವು ಅರ್ಜಿ ಸಲ್ಲಿಸಲು ಇಚ್ಛಿಸುವ ಭಾಷೆಯನ್ನು ಚೆನ್ನಾಗಿ ತಿಳಿದಿರಬೇಕು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಆದ್ಯತೆ ನೀಡಲಾಗುವುದು.

ಅಭ್ಯರ್ಥಿಗಳು 354 ರೂಪಾಯಿಗಳ ಡಿ.ಡಿ.ಯನ್ನು DDO, Akashvani Bengaluru (Payable at Bengaluru) ಇವರಿಗೆ ಪಾವತಿಯಾಗುವಂತೆ ಪಡೆದು ಅರ್ಜಿಯೊಂದಿಗೆ ಕಳಿಸಿಕೊಡಬೇಕು. ಅಥವಾ ಪ್ರಸಾರ ಭಾರತಿಯ, ಭಾರತೀಯ ಸ್ಟೇಟ್‌ ಬ್ಯಾಂಕ್‌ ಖಾತೆ ಸಂಖ್ಯೆ 10902815290 ಐಎಫ್‌ಎಸ್‌ಸಿ ಸಂಖ್ಯೆ SBIN0040016 ಗೆ ಜಮೆ ಮಾಡಿ ರಸೀದಿಯನ್ನು ಲಗತ್ತಿಸಬಹುದು. ಅರ್ಜಿಯನ್ನು ದಿನಾಂಕ 31.10.2024 ರ ಒಳಗೆ ತಲುಪುವಂತೆ ಕಳುಹಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ: ನಿಲಯ ನಿರ್ದೇಶಕರು, ಆಕಾಶವಾಣಿ, ಬಿಜೈ ಪೋಸ್ಟ್, ಕದ್ರಿ ಹಿಲ್ಸ್, ಮಂಗಳೂರು 575 004. ಅರ್ಜಿ ವಿವರಗಳಿಗಾಗಿ hr.avmng@gmail.com ಗೆ ಸಂಪರ್ಕಿಸಬಹುದು ಅಥವಾ ನಿಲಯಕ್ಕೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಸಾಮಾನ್ಯ ಜ್ಞಾನ ಹಾಗೂ ಸಾಂಸ್ಕೃತಿಕ ವಿಚಾರಗಳನ್ನು ತಿಳಿದವರಾಗಿದ್ದು ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಕೆಲಸ ಮಾಡಲು ಸಿದ್ದರಾಗಿರಬೇಕು. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ‍‍ಧ್ವನಿ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಆಯ್ಕೆಗೊಂಡವರಿಗೆ ನಿಯಮಾನುಸಾರ ಸಂಭಾವನೆ ನೀಡಲಾಗುವುದು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್