ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ.ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

Related posts

National Fame Award of India Books of Award – Sushanth Brahmavar

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ