ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 01 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್. ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್‌ಗಳು: ಉಡುಪಿ ತಾಲೂಕಿನ ಕಡೆಕಾರು, ಕೆಮ್ಮಣ್ಣು ಹಾಗೂ ಪೆರ್ಡೂರು. ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಚಾಂತಾರು. ಹೆಬ್ರಿ ತಾಲೂಕಿನ ಶಿವಪುರ ಹಾಗೂ ಬೆಳ್ವೆ. ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ. ಕುಂದಾಪುರ ತಾಲೂಕಿನ ಹೆಂಗವಳ್ಳಿ ಮತ್ತು ಗುಜ್ಜಾಡಿ. ಬೈಂದೂರು ತಾಲೂಕಿನ ಹಳ್ಳಿಹೊಳೆ ಹಾಗೂ ಕಾರ್ಕಳ ತಾಲೂಕಿನ ಮಾಳ ಮತ್ತು ನಿಟ್ಟೆ. ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ಖಾಲಿ ಇರುವ ಯು.ಆರ್.ಡಬ್ಲ್ಯೂ ಹುದ್ದೆಗಳ ನೇಮಕಾತಿಗಾಗಿ, ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು ತಮ್ಮ ವಾಸಸ್ಥಳ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ನಿಂದ ಪಡೆದ ವಾಸ್ತವ್ಯ ದೃಢೀಕರಣ ಪತ್ರ ಹಾಗೂ 3 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ: 0820- 2574810/2574811 ಅಥವಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲ್ಯೂ) (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !