ಅಸ್ವಸ್ಥಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೇ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಸರಕಾರಿ ಬಸ್ ಚಾಲಕ ನಿರ್ವಾಹಕರಿಗೆ ಮೆಚ್ಚುಗೆ

ಹೆಬ್ರಿ : ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವ‌ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸಂಭವಿಸಿದೆ.

ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿತ್ತು. 19‌ರ ಹರೆಯದ ಸುರಕ್ಷಾ ಎಂಬವರು ಮೇಗರವಳ್ಳಿಯಲ್ಲಿ ಬಸ್ ಹತ್ತಿದ್ದರು. ಆಗುಂಬೆ ಘಾಟಿಯಲ್ಲಿ ತೀವ್ರ ಅಸ್ವಸ್ಥಗೊಂಡಾಗ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದುಕೊಂಡು ಹೋದಾಗ, ಸುರಕ್ಷಾ ಯಾವುದೇ ರೀತಿಯ ಚೇತರಿಕೆ ಕಂಡು ಬಂದಿಲ್ಲ. ಅಲ್ಲಿಂದ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿಯ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಬಂದು ಅವರನ್ನು ದಾಖಲು ಮಾಡಲಾಗಿದೆ. ಸದ್ಯಕ್ಕೆ ಸ್ವಲ್ಪ ಮಟ್ಟದಲ್ಲಿ ಸುಧಾರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕಳುಹಿಸಲಾಗಿದೆ.

ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಸುರಕ್ಷಾ ಚೇತರಿಕೆಗೆ ಬಹಳಷ್ಟು ಶ್ರಮವಹಿಸಿದರು. ಬಸ್ಸಿನಲ್ಲಿ ಮಹಿಳೆಯರಿಂದ ಜೀವ ಉಳಿಸಲು ಸಹಾಯ ಕೇಳಿದಾಗ ಯಾರ ಸಹಾಯವೂ ಸಿಗದಿದ್ದರೂ, ಯುವತಿಯೊಬ್ಬರು ಒಬ್ಬಳು ಬಾಯಿಗೆ ಶ್ವಾಸ ನೀಡಿ ಮಾನವೀಯತೆ ಮೆರೆದಿದ್ದಾಳೆ. ಇವರೊಂದಿಗೆ ಸಿಬ್ಬಂದಿಗಳು ತೋರಿದ ಸಕಾಲಿಕ ಶ್ರಮದಿಂದ ಜೀವ ಉಳಿದಿದೆ. ಹೆಬ್ರಿಯ ಪೊಲೀಸರು, ಸಾರ್ವಜನಿಕರು ಈ ಸೇವಾಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ