ಅಡಿಕೆ ಬೆಳೆಗಾರರ ಸಮಸ್ಯೆ – ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಭೇಟಿಯಾದ ಕರಾವಳಿ ಸಂಸದರು

ಉಡುಪಿ : ನವ ದೆಹಲಿಯ ಕೃಷಿ‌ಭವನ‌ದಲ್ಲಿ ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾನ್ ಚೌಹಾಣ್ ಭೇಟಿಯಾಗಿ ರಾಜ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕರಾವಳಿಯ ಸಂಸದರು ಮನವಿ ಮಾಡಿದರು.

ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಡಿಸೆಂಬರ್ 6ರಂದು ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಬರುವುದಾಗಿ ಕೇಂದ್ರ ಸಚಿವರು ತಿಳಿಸಿ ಅಡಿಕೆ ಬೆಳೆಗಾರರ ನೆರವಿಗೆ ಬರಲು ಕೇಂದ್ರ ಸರಕಾರ ಭದ್ಧವಾಗಿದೆ ಎಂದರು ಎಂದು ಸಂಸದರು ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಶಿವಮೊಗ್ಗ ಸಂಸದ ಶ್ರೀ ರಾಘವೇಂದ್ರ ವಹಿಸಿದ್ದು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಬ್ರಿಜೇಶ್ ಚೌಟ ಹಿರಿಯರಾದ ಹೊಸ ಬಾಲೆ ಮಂಜಪ್ಪ ಮುಂತಾದವರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ