21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದನಗಳ್ಳನ ಬಂಧನ

ಮಣಿಪಾಲ : ದನ ಕಳ್ಳತನ ಪ್ರಕರಣದಲ್ಲಿ 21 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಟಪಾಡಿಯ ಸೈಯದ್‌ ಮುಸ್ತಾಕ್‌ (45) ಬಂಧಿತ ಅರೋಪಿ. 1993ರ ಜುಲೈ 21ರಂದು ಶಿವಳ್ಳಿಯ ಇಂದ್ರಾಳಿ ದೇವಸ್ಥಾನದ ಹತ್ತಿರ ದೇವೇಂದ್ರ ನಾಯ್ಕ ಅವರ ಗದ್ದೆಯ ಬಳಿ ಮೇಯಲು ಬಿಟ್ಟಿದ್ದ ಎರಡು ದನಗಳನ್ನು ಯಾರೋ ಕಳವು ಮಾಡಿಕೊಂಡು ಹೋದ ಬಗ್ಗೆ ದೇವೇಂದ್ರ ನಾಯ್ಕ ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿ, ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅನಂತರ ಆತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಈ ಬಗ್ಗೆ ಈಗಿನ ಮಣಿಪಾಲ ಪೊಲೀಸ್‌ ಠಾಣಾ ನಿರೀಕ್ಷಕ ದೇವರಾಜ ಟಿ.ವಿ. ಅವರ ನೇತೃತ್ವದಲ್ಲಿ ಮಣಿಪಾಲ ಪೊಲೀಸ್‌ ಠಾಣಾ ಸಿಬಂದಿ ಪ್ರಸನ್ನ ಕಾರ್ಯಾಚರಣೆ ನಡೆಸಿ ಕಟಪಾಡಿಯ ಮಣಿಪುರ ಗುಜ್ಜಿ ಹೌಸ್‌ ಬಳಿ ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು