ವಿದ್ಯಾರ್ಥಿಗಳ ರೂಮ್‌ಗೆ ನುಗ್ಗಿ ಲ್ಯಾಪ್ ಟಾಪ್, ಐಪಾಡ್ ಕಳ್ಳತನ‌ ಮಾಡುತ್ತಿದ್ದವರ ಬಂಧನ

ಮಣಿಪಾಲ : ಮಣಿಪಾಲ ಠಾಣೆ ವ್ಯಾಪ್ತಿಯ ವಿದ್ಯಾರತ್ನನಗರದ ಅಪಾರ್ಟಮೆಂಟ್‌ವೊಂದರಲ್ಲಿ ಎರಡು ಲ್ಯಾಪ್‌‌ಟಾಪ್‌ ಮತ್ತು ಐಪಾಡ್‌ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿ ಕಾರ್ತಿಕ್ ಮತ್ತು ಬಾಲನ್‌ ಗೋವಿಥಾನ್‌ ಬಂಧಿತ ಆರೋಪಿಗಳು.

ಆರೋಪಿಗಳಿಂದ ಸುಮಾರು 400000 ರೂ. ಮೌಲ್ಯದ ಎರಡು ಲ್ಯಾಪ್‌‌ಟಾಪ್‌ ಮತ್ತು 1 ಆಪಲ್‌ ಕಂಪನಿಯ ಐಪಾಡ್‌‌ನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವರು ಮಣಿಪಾಲದ ಅಪಾರ್ಟ್‌ಮೆಂಟ್‌ಗಳಲ್ಲಿ ವಿದ್ಯಾರ್ಥಿಗಳ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ