ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ – 8 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ವಶ

ಬ್ರಹ್ಮಾವರ : ಬ್ರಹ್ಮಾವರ ತಾಲೂಕಿನ ಉಪ್ಪೂರು- ಕೆಜಿ ರೋಡ್ ಸಮೀಪ ಕಾರ್ಯಾಚರಣೆ ನಡೆಸಿರುವ ಪೊಲೀಸರು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಸತ್ಯರಾಜ್‌ ತಂಬಿ ಅಣ್ಣ(32) ಕೃಷ್ಣ (43) ಉಪ್ಪೂರು, ಶಕಿಲೇಶ್‌(25) ಬಂಧಿತರು.ಸೆನ್ ಠಾಣಾ ನಿರೀಕ್ಷಕ ರಾಮಚಂದ್ರ ನಾಯಕ್ ತಂಡವು ಈ ಕಾರ್ಯಾಚರಣೆ ನಡೆಸಿದ್ದು ಬಂಧಿತರಿಂದ ಸುಮಾರು 8 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.ಗಾಂಜಾ ಮಾರಲು ಹೊಂಚು ಹಾಕುತ್ತಿದ್ದ ಆರೋಪಿಗಳಿಂದ ಮೂರು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇದರ ಹಿಂದಿರುವ ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ