ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರಿಗೆ ಕೃತಕ ಕಾಲು ವಿತರಣೆ

ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರಿಗೆ ಮಂಜೂರಾದ ಕೃತಕ ಕಾಲನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಕಾಶ್ ಶೆಟ್ಟಿ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶೋಕ್ ಕುಂದರ್ ಸೇರಿದಂತೆ ಎರಡು ಫಲಾನುಭವಿಗಳಿಗೆ ಕೃತಕ ಕಾಲನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಕಾಪು ತಹಶೀಲ್ದಾರರಾದ ಪ್ರತಿಭಾ ಆರ್, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ರತ್ನ, ಉಪಸ್ಥಿತರಿದ್ದರು.

Related posts

ಅನುಮಾನಾಸ್ಪದ ವ್ಯಕ್ತಿಗಳು, ಬೋಟ್‌ಗಳು ಕಂಡುಬಂದಲ್ಲಿ‌ ಮಾಹಿತಿ ನೀಡುವಂತೆ ಮೀನುಗಾರರಿಗೆ ಸೂಚನೆ

‘ಉಡುಪಿ ಸಂಜೀವಿನಿ’ ಉತ್ಪನ್ನ ಮಾರುಕಟ್ಟೆಗೆ ಬಿಡುಗಡೆ

ಮನೆಗೆ ನುಗ್ಗಿದ ಕಳ್ಳರು; ಹಣ ಹಾಗೂ ಚಿನ್ನಾಭರಣ ಕಳವುಗೈದು ಎಸ್ಕೇಪ್!