ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

ಉಡುಪಿ : ಆರ್ಯಭಟ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು(59) ಮಣಿಪಾಲದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

ಇತ್ತೀಚೆಗೆ ಅಯೋಧ್ಯೆ ಶ್ರೀ ರಾಮಮಂದಿರಕ್ಕೆ ಮೊಟ್ಟ ಮೊದಲ ಬಾರಿಗೆ ಯಕ್ಷಗಾನ ತಂಡವನ್ನು ಕರೆದುಕೊಂಡು ಹೋಗಿ ಯಕ್ಷಗಾನ ಪ್ರದರ್ಶನ ನೀಡಿದ್ದು, ಪೇಜಾವರ ಶ್ರೀಗಳು ಅಯೋಧ್ಯೆಯಲ್ಲಿ ಇವರನ್ನು ಸನ್ಮಾನಿಸಿದ್ದರು. ಕಮಲಾಕ್ಷ ಪ್ರಭು ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಯಕ್ಷ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಇವರು ದಕ್ಷಿಣ ಆಫ್ರಿಕಾ, ದುಬೈ ಮೊದಲಾದ ದೇಶಗಳಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ್ದರು. ಇದಲ್ಲದೆ ದೆಹಲಿ, ಮುಂಬೈ, ಬೆಂಗಳೂರು, ಮೊದಲಾದ ಕಡೆಗಳಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನ ಆಯೋಜಿಸಿದ್ದರು. ಇವರ ನಿಧನಕ್ಕೆ ಯಕ್ಷಗಾನ ಕಲಾವಿದರು ಸಂತಾಪ ಸೂಚಿಸಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ