ಪುತ್ತೂರು ನಗರ ಠಾಣೆಯ ASI ಬ್ರೈನ್ ಸ್ಕ್ರೋಕ್‌ನಿಂದ ಮೃತ್ಯು

ಪುತ್ತೂರು : ಪೆರುವಾಜೆ ಗ್ರಾಮದ ನಿವಾಸಿ ಎಎಸ್‌ಐ ಸುಂದರ ಕಾನಾವು ಅವರು ಪುತ್ತೂರು ನಗರ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತರಾದರು.

ಬ್ರೈನ್ ಸ್ಟ್ರೋಕ್‌ಗೆ ಒಳಗಾದ ಅವರು ಮಂಗಳೂರಿನ ಪಡೀಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಸದ್ಯ ಮೃತರ ಪಾರ್ಥಿವ ಶರೀರ ಮಂಗಳೂರಿನಲ್ಲಿ ಇದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲ್ಕಿ ಪೊಲೀಸ್ ಠಾಣೆಯಿಂದ ಅವರ ವೃತ್ತಿ ಜೀವನ ಆರಂಭಗೊಂಡಿತ್ತು. ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಹೆಡ್ ಕಾನ್ಸ್ಟೇಬಲ್ ಆಗಿ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡಿದ್ದರು. ಅಲ್ಲಿಂದ ಸಂಪ್ಯ ಠಾಣೆಗೆ ಪೊಲೀಸ್ ಉಪ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದರು. ಕೆಲವು ದಿನಗಳ ಹಿಂದೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.

Related posts

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ