ಪ್ರತಿಭಟನೆ ಸಂದರ್ಭ ಎಎಸ್ಐಯನ್ನು ತಳ್ಳಿ ಗಾಯ – ಡಿವೈಎಫ್ಐ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ಪ್ರತಿಭಟನೆ ನಡೆದ ವೇಳೆ ಎಎಸ್ಐಯನ್ನು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ಡಿವೈಎಫ್‌ಐ ಸಂಘಟನೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.28ರಂದು ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ಆಯೋಜನೆಗೊಂಡಿತ್ತು. ಈ ವೇಳೆ ಬಂದೋಬಸ್ತ್ ಕರ್ತವ್ಯನಿರತ ಕದ್ರಿ ಠಾಣೆಯ ಎಎಸ್ಸೆ ಮುತ್ತಪ್ಪ ಗೌಡ ಬಿ. ಅವರನ್ನು ಪ್ರತಿಭಟನಾಕಾರರು ತಳ್ಳಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ಎಎಸ್ಐಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಎಎಸ್ಐ ಮುತ್ತಪ್ಪ ಗೌಡ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ