ಮರಳು ಮಾಫಿಯಾ ವಿರುದ್ದ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ : ಇಬ್ಬರ ಬಂಧನ

ಮಂಗಳೂರು : ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರು ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಆಗಿದ್ದಾರೆ. ಮುಹಮ್ಮದ್ ಅತಾವುಲ್ಲಾ ಎಂಬಾತನು ಹಲ್ಲೆಗೆ ಪ್ರಚೋದನೆ ನೀಡಿದಂತೆ ಹೇಳಲಾಗಿದ್ದು, ತೌಸೀರ್ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಈ ಘಟನೆ ಅಕ್ಟೋಬರ್ 5ರಂದು ಅಡ್ಯಾರ್ ಬ್ರಿಡ್ಜ್ ಬಳಿ ನಡೆದ ಪ್ರತಿಭಟನೆಯ ಸಮಯದಲ್ಲಿ ನಡೆದಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆಲ್ವಿನ್ ಡಿಸೋಜಾ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಲಾಗಿತ್ತು.

ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ