ಉಡುಪಿ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯ ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್ (32) ಎಂದು ಗುರುತಿಸಲಾಗಿದೆ.
ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನನ್ನು ಬೈಕ್‌ನಲ್ಲಿ ಇಬ್ಬರು ಆರೋಪಿಗಳು ಹಿಂಬಾಲಿಸಿ ಕೊಲೆಗೆ ಯತ್ನಿಸಿದ್ದಾರೆ.
ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.