ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿ‌ಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ; ಇಬ್ಬರ ಬಂಧನ

ಉಡುಪಿ : ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯ ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್ (32) ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನನ್ನು ಬೈಕ್‌ನಲ್ಲಿ ಇಬ್ಬರು ಆರೋಪಿಗಳು ಹಿಂಬಾಲಿಸಿ ಕೊಲೆಗೆ ಯತ್ನಿಸಿದ್ದಾರೆ.

ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar