ಒರಿಸ್ಸಾದಿಂದ ಮಂಗಳೂರಿಗೆ 8.650 ಕೆಜಿ ಗಾಂಜಾ ಸಾಗಿಸಿ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್

ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಿವಾಸಿ ದಿಲ್ ದಾರ್ ಆಲಿ(28) ಬಂಧಿತ ಆರೋಪಿಗಳು.

ಆರೋಪಿಗಳು ಒರಿಸ್ಸದಲ್ಲಿ ಗಾಂಜಾ ಖರೀದಿಸಿ ಮಂಗಳೂರಿಗೆ ಸಾಗಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದಿದ್ದಾರೆ. ಇವರು ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ ಸಂದರ್ಭ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಂದ 2,60,000 ರೂ. ಮೌಲ್ಯದ 8.650 ಕೆಜಿ ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ