ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಸೆರೆ

ಮೂಲ್ಕಿ : ಯುವಕರಿಬ್ಬರು ಬಪ್ಪನಾಡು ಗ್ರಾಮದ ಸುಖಾನಂದ ಪಾರ್ಕ್‌ ಬಳಿ ಗಾಂಜಾ ಮಾರಾಟಕ್ಕಾಗಿ ಯತ್ನಿಸಿ ಗಿರಾಕಿಗಳಿಗಾಗಿ ಕಾಯುತ್ತಿದ್ದ ಸಂದರ್ಭ ಮಂಗಳೂರು ಉತ್ತರ ವಿಭಾಗದ ಮಾದಕ ವಸ್ತು ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ನಾಜಿಲ್‌ ಮತ್ತು ಸುಕೇಶ್‌ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 50 ಸಾವಿರ ರೂ. ಬೆಲೆಯ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆ್ಯಂಟಿ ಡ್ರಗ್‌ ವಿಭಾಗದ ಉಸ್ತುವಾರಿ ಸುರತ್ಕಲ್‌ ಎಸ್‌.ಐ. ರಾಘವೇಂದ್ರ ಅವರು ಸಿಬಂದಿ ಜತೆಗೆ ದಾಳಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅಸ್ರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಪರೂಪದ ಜನನ – ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ

ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಸವಾರ ಬಲಿ