ನಕಲಿ ಐಟಿ ದಾಳಿ ನೆಪದಲ್ಲಿ ಮನೆಗೆ ನುಗ್ಗಿ ದರೋಡೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಕೋಟ : ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಬಸ್ ನಿಲ್ದಾಣದ ಎದುರಿನ ಕವಿತಾ ಎಂಬವರ ಮನೆ ದರೋಡೆ ಯತ್ನ ಪ್ರಕರಣದ ಇಬ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ನಾಯಕ್‌(45) ಮತ್ತು ದೇವರಾಜ್‌ ಸುಂದರ್‌ ಮೆಂಡನ್‌(46) ಬಂಧಿತರು.

ಸ್ವಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಸುಮಾರು 6-8 ಜನರ ತಂಡ ಕವಿತಾ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಬಾಗಿಲು ತೆರೆಯಲು ವಿಫಲ ಯತ್ನ ಮಾಡಿ ಗೇಟನ್ನು ಹಾನಿಗೊಳಿಸಿತ್ತು. ಬಳಿಕ ಕಾರಿನಲ್ಲಿ ಪರಾರಿಯಾಗಿತ್ತು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ನಕಲಿ ಐಟಿ ದಾಳಿ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ನಡೆಸಲು ಮಹಾರಾಷ್ಟ್ರದಿಂದ ಬಂದಿದ್ದರು ಎಂದು ಗೊತ್ತಾಗಿದೆ. ಉಳಿದ ಆರೋಪಿಗಳಿಗಾಗಿ ಕೋಟ ಪೊಲೀಸರು ಬಲೆ ಬೀಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ