NewsDesk

ದ.ಕ ಜಿಲ್ಲೆಯ ಎಲ್ಲಾ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು.15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ‌ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ…

Read more

ಜುಲೈ 15ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಉಡುಪಿ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಜು.16 ರಿಂದ 18ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ…

Read more

“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”

ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…

Read more

ಮನೆಯ ಹಿಂಬಾಗಿಲು ಒಡೆದು ನಗದು ಕಳವು

ಮಂಗಳೂರು : ನಗರದ ಬಿಜೈ ನ್ಯೂರೋಡ್ ಬಳಿಯ ಮನೆಯೊಂದರ ಹಿಂಬಾಗಿಲು ಒಡೆದು ಕಳವು ಕೃತ್ಯ ಎಸಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮನೆಯೆಲ್ಲಾ ಜಾಲಾಡಿರುವ ಕಳ್ಳರು ಗಾಡ್ರೆಜ್ ಒಡೆದು ತಲಾಶ್ ನಡೆಸಿದ್ದಾರೆ. ಆದರೆ ಅವರಿಗೆ 5ಸಾವಿರ ರೂ. ನಗದು ಹಾಗೂ ಒಂದು…

Read more

ರಾಹುಲ್ ಗಾಂಧಿಗೆ ಒಳ್ಳೆ ಬುದ್ಧಿಕೊಡುವಂತೆ ಪೊಳಲಿ ಶ್ರೀದೇವಿಯ ಮೊರೆಹೊಕ್ಕ ವಿಎಚ್‌ಪಿ

ಮಂಗಳೂರು : ಸಂಸತ್ತಿನಲ್ಲಿ ಮೊದಲ ಭಾಷಣ ಮಾಡುತ್ತಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹಿಂದುತ್ವದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ವಿಎಚ್‌ಪಿ ಅವರಿಗೆ ಒಳ್ಳೆಯ ಬುದ್ಧಿ ಕೊಡುವಂತೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಮೊರೆಹೊಕ್ಕಿದೆ. ಸಂಸತ್ತಿನಲ್ಲಿ ಹಿಂದೂ ದೇವರ…

Read more

ಸೆಝ್ ಕೈಗಾರಿಕಾ ವಲಯದಲ್ಲಿ ಬೆಂಕಿ‌ ಅವಘಡ – ಕೋಟ್ಯಾಂತರ ನಷ್ಟ

ಮಂಗಳೂರು : ಸೆಝ್ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಅಥೆಂಟಿಕ್ ಓಷನ್ ಟ್ರೆಷರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ರವಿವಾರ ಮಧ್ಯಾಹ್ನ ಸಂಭವಿಸಿದೆ. ಕಂಪೆನಿಯಲ್ಲಿ ದುರಸ್ತಿ ಕಾರ್ಯನಡೆಯುತ್ತ ಕಾರಣ ನೌಕರರು ಯಾರು ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಥೆಂಟಿಕ್ ಓಷನ್…

Read more

ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡಜರಿತ; ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ…

Read more

ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವದ ಮೊರೆ ಹೋದ ಪಾಕಿಸ್ತಾನ ಮೂಲದ ಕುಟುಂಬ

ಉಡುಪಿ : ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ. ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ. ಯೂಟ್ಯೂಬ್‌ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಪಡುಬಿದ್ರಿ : ಮೂರು ದಶಕಗಳ ಹಿಂದಿನ ಪ್ರಕರಣವೊಂದರ ಆರೋಪಿ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಶೀರ್‌ ಅಹಮ್ಮದ್‌ ಎಂಬಾತನನ್ನು ಮಂಗಳೂರಿನ ವೆಲೆನ್ಶಿಯಾ ಬಳಿ ಪಡುಬಿದ್ರಿ ಪೊಲೀಸರು ಬಂಧಿಸಿ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಜುಲೈ 15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.…

Read more

ರಾಷ್ಟ್ರೀಯ ಹೆದ್ದಾರಿ ಸಂಚಾರ ದಟ್ಟಣೆ: ತ್ವರಿತ ಪರಿಹಾರಕ್ಕೆ ಯು.ಟಿ. ಖಾದರ್ ಸೂಚನೆ

ಮಂಗಳೂರು : ನಗರದ ನಂತೂರು, ಪಂಪ್‌ವೆಲ್ ಸಹಿತ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ವೃತ್ತಗಳಲ್ಲಿ ಸುಗಮ ಸಂಚಾರಕ್ಕೆ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಶನಿವಾರ ನಂತೂರು ವೃತ್ತದಲ್ಲಿ ದಿನವಿಡೀ ಸಂಚಾರ ದಟ್ಟಣೆ ಉಂಟಾಗಿ…

Read more