NewsDesk

ಧಮ್, ತಾಕತ್ ಇದ್ದರೆ ಕರಾವಳಿ ಸಂಸದರು ಪ್ರಧಾನಿ ನಿವಾಸದ ಮುಂದೆ ಧರಣಿ ನಡೆಸಿ ಅನುದಾನ ತರಲಿ – ಕಾಂಗ್ರೆಸ್ ಸವಾಲು

ಉಡುಪಿ : ಉಡುಪಿಯಲ್ಲಿ ಇತ್ತೀಚೆಗೆ ಬಿಜೆಪಿಯ ಐವರು ಶಾಸಕರು ಸುದ್ದಿಗೋಷ್ಠಿ ನಡೆಸಿ, ಸಿಎಂ ಸಿದ್ದರಾಮಯ್ಯ ಕರಾವಳಿಗೆ ಅನುದಾನ ಬಿಡುಗಡೆ ಮಾಡದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರುವುದಾಗಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್, ಕರಾವಳಿಯ ಸಂಸದರು ದಮ್ಮು ತಾಕತ್ತಿದ್ದರೆ…

Read more

ಎಂಎಸ್ಇಝೆಡ್‌‌ಗೆ ಭೂಮಿ ಕೊಟ್ಟ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್‌‌ನಲ್ಲಿ ಉದ್ಯೋಗ;

ಮಂಗಳೂರು : ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್‌‌ಪಿಎಲ್‌ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್‌ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ 115 ಮಂದಿ ಜಿಎಂಪಿಎಲ್‌ (ಗೈಲ್‌ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ…

Read more

ಸಿಪಿಐ ಮಾಜಿ ಜಿಲ್ಲಾ ಕಾರ್ಯದರ್ಶಿ ಬಿ ಕೆ ಕೃಷ್ಣಪ್ಪ ನಿಧನ

ಮಂಗಳೂರು : ಭಾರತ ಕಮ್ಯೂನಿಸ್ಟ್‌ನ ಮಾಜಿ ಜಿಲ್ಲಾ ಕಾರ್ಯದರ್ಶಿ, ಪಕ್ಷದ ರಾಜ್ಯ ನಿಯಂತ್ರಣ ಮಂಡಳಿ ಸದಸ್ಯರಾಗಿದ್ದ ಬಿ.ಕೆ.ಕೃಷ್ಣಪ್ಪ ರವರು ಮಂಗಳವಾರ ರಾತ್ರಿ 8 ಗಂಟೆಗೆ ಅವರ ಸ್ವಗೃಹ‌ದಲ್ಲಿ ನಿಧನರಾದರು. ಅವರು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ‌ಯಾಗಿ, ಮುನಿಸಿಪಾಲ್ ಯೂನಿಯನ್‌ನ ಮುಖಂಡರಾಗಿ ಹಲವಾರು ವರ್ಷಗಳ…

Read more

ವೈಯಕ್ತಿಕ ಸ್ವಚ್ಛತೆ ಕಾಪಾಡುವ ನಾಗರಿಕರು ಸಮಾಜಮುಖಿಯಾಗಿ ಚಿಂತಿಸದಿರುವುದು ದುರಂತ : ಬ್ರಿಜೇಶ್ ಚೌಟ

ಮಂಗಳೂರು : ಸ್ವಚ್ಛತೆ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರವಾದಲ್ಲಿ ಮಾತ್ರ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು. ದ.ಕ ಜಿಲ್ಲಾಡಳಿತ, ಜಿಪಂ, ಮಂಗಳೂರು ಮನಪಾ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್…

Read more

ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣ ಆರೋಪಿ ಹಾಗೂ ಮಹಿಳೆಯರ ಚಿನ್ನಾಭರಣ ದೋಚುತ್ತಿದ್ದ ಖದೀಮ ಪೊಲೀಸ್ ಬಲೆಗೆ

ಮಂಗಳೂರು : ಮಹಿಳೆಯರನ್ನು ಫೇಸ್‌ಬುಕ್‌ನಂತಹ ಜಾಲತಾಣಗಳ ಮೂಲಕ ಪರಿಚಯಿಸಿಕೊಂಡು ಬಳಿಕ ಸ್ನೇಹ ಬೆಳೆಸಿ ನಾಟಕವಾಡಿ ಅವರೊಂದಿಗೆ ಸಂಪರ್ಕ ಸಾಧಿಸಿ ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ ಹಾಗೂ ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

Read more

ಹಿಂದೂ ಯುವಸೇನೆ ಹಿರಿಯಡಕ ನೇತೃತ್ವದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಹಿರಿಯಡಕ : ಹಿಂದೂ ಯುವಸೇನೆ ಹಿರಿಯಡಕ ಶಾಖೆ ವತಿಯಿಂದ ರಕ್ತನಿಧಿ ವಿಭಾಗ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಶಿಬಿರವನ್ನು ಕಾಪು ಶಾಸಕ ಗುರ್ಮೆ…

Read more

ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ

ಗಂಗೊಳ್ಳಿ : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ…

Read more

ಗುಂಪುಗಳ ನಡುವೆ ಗಲಾಟೆ; ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ ಉಂಟಾಗುವ ರೀತಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಸ್ತಿನಲ್ಲಿದ್ದ ಪೊಲೀಸರು ಗಲಾಟೆ ನಿಲ್ಲಿಸಲು ಅವರ ಹತ್ತಿರಕ್ಕೆ ಹೋಗುತ್ತಿದ್ದಂತೆ ಎಲ್ಲರೂ ಅಲ್ಲಿಂದ ಓಡಿ…

Read more

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹೃದಯ ಸ್ತಂಭನ – ಸವಾರ ಸಾವು

ಮಣಿಪಾಲ : ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹೃದಯ ಸ್ತಂಭನಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಘವೇಂದ್ರ (49) ಮೃತ ಸವಾರ. ಅಲೆವೂರು ಗ್ರಾಮದ ಮಂಚಿಕೆರೆಯ ಮಣಿಪಾಲ-ಅಲೆವೂರು ರಸ್ತೆಯಲ್ಲಿ ಕೆ. ಅಶ್ವಥ್‌ ಅವರೊಂದಿಗೆ ಪುರೋಹಿತ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಅವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗಲೇ…

Read more

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ ಡಿಕ್ಕಿ : ಪ್ರಯಾಣಿಕರಿಗೆ ಗಾಯ

ಕುಂದಾಪುರ : ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಇನ್ನೊಂದು ಖಾಸಗಿ ಬಸ್ಸು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು 8 ಕ್ಕೂ ಮಿಕ್ಕಿ ಪ್ರಯಾಣಿಕರು ಗಾಯಗೊಂಡ ಘಟನೆ ಹೆಮ್ಮಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಭಟ್ಕಳದಿಂದ ಬೆಂಗಳೂರಿಗೆ…

Read more