ಎಸ್‌ಎಸ್‌ಎಫ್‌ನಿಂದ ಮಾದಕ ದ್ರವ್ಯ ವ್ಯಸನದ ವಿರುದ್ದ ಜಾಗೃತಿ ಅಭಿಯಾನ

ಉಡುಪಿ : ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ವತಿಯಿಂದ ಉಡುಪಿ ನಗರ ಪೊಲೀಸ್ ಠಾಣೆ ಸಹಯೋಗದೊಂದಿಗೆ ಮಾದಕ ದ್ರವ್ಯ ವಿರೋಧಿ ಮಾಸಾಚರಣೆಯ ಅಂಗವಾಗಿ ಕ್ಯಾಂಪಸ್ ವಿದ್ಯಾರ್ಥಿಗಳಿಗಾಗಿ ಮಾದಕ ವ್ಯಸನದ ವಿರುದ್ದ ಜಾಗೃತಿ ಅಭಿಯಾನವನ್ನು ದೊಡ್ಡಣಗುಡ್ಡೆ ರಹ್ಮಾನಿಯ ಜುಮ್ಮಾ ಮಸೀದಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಉಡುಪಿ ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕರುಗಳಾದ ಈರಣ್ಣ ಶ್ರೀರಂಗುಪ್ಪಿ ಹಾಗೂ ಪುನೀತ್ ಕುಮಾರ್ ಮಾದಕ ವ್ಯಸನದ ಬಗ್ಗೆ ಹಾಗೂ ಸಂಚಾರ ನಿಯಮ ಪಾಲನೆ ಬಗ್ಗೆ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಧ್ಯಕ್ಷತೆಯನ್ನು ಎಸ್‌ಎಸ್‌ಎಫ್ ಉಡುಪಿ ಡಿವಿಷನ್ ಅಧ್ಯಕ್ಷ ಇಮ್ತಿಯಾಝ್ ಸಂತೋಷ್ ನಗರ ವಹಿಸಿದ್ದರು.

ಕಾರ್ಯಾಗಾರವನ್ನು ಮಸೀದಿ ಸದರ್ ಉಸ್ತಾದ್, ಮಾಜಿ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಹದಿ ಉದ್ಘಾಟಿಸಿದರು. ಪೋಲಿಸ್ ಸಿಬ್ಬಂದಿಗಳಾದ ಬಶೀರ್, ಚೇತನ್, ದೊಡ್ಡಣಗುಡ್ಡೆ ಮಸೀದಿಯ ಕಾರ್ಯದರ್ಶಿ ಖಾಸಿಂ, ಸಮಾಜ ಸೇವಕ ರಪೀಕ್ ದೊಡ್ಡಣಗುಡ್ಡೆ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಫವಾಝ್ ದೊಡ್ಡಣಗುಡ್ಡೆ, ಕೋಶಾಧಿಕಾರಿ ಮುತ್ತಲಿಬ್ ರಂಗನಕೆರೆ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ