ಉಡುಪಿ ನಗರದ ವಿವಿಧೆಡೆ ಡೆಂಗ್ಯು ಕುರಿತು ಜಾಗೃತಿ ಕಾರ್ಯಕ್ರಮ

ಉಡುಪಿ : ಉಡುಪಿ ನಗರಸಭೆ ವತಿಯಿಂದ ಡೆಂಗ್ಯು ರೋಗದ ಹರಡುವಿಕೆ ವಿರುದ್ಧ ಒಣದಿನದ (ಡ್ರೈಡೇ) ಅಂಗವಾಗಿ ಮುಂಜಾಗೃತಾ ಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಡೆಂಗ್ಯು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಅಜ್ಜರಕಾಡಿನ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಡ್ರೈ ಡೇಯನ್ನು ಆಚರಿಸಲಾಯಿತು. ಈ ವೇಳೆ ಸುತ್ತಮುತ್ತ ಎಲ್ಲೂ ನೀರು ನಿಲ್ಲದಂತೆ ಎಚ್ಚರ ವಹಿಸುವಂತೆ ವಿದ್ಯಾರ್ಥಿ‌ಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನಎಣ್ಣೆ ಹಚ್ಚುವಂತೆ ಸೂಚಿಸಿ ವಿದ್ಯಾರ್ಥಿಗಳಿಗೆ ಬೇವಿನಎಣ್ಣೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭಾ ಪೌರಾಯುಕ್ತ ರಾಯಪ್ಪ, ಪರಿಸರ ಅಭಿಯಂತರರಾದ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಸುರೇಂದ್ರ ಹೋಬಳಿದಾರ್, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ ಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕ‌ರ್ ಶೆಟ್ಟಿ ಎಸ್, ರಾಜ್ಯಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಂಜುನಾಥ, ಸಮಾಜ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ರಾಜೇಂದ್ರ ಕೆ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಪಾಟ್ಕರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !