ವಿದ್ಯಾರ್ಥಿಗಳಿಗಾಗಿ ಮಾದಕ ವಸ್ತುಗಳ ಕುರಿತು ಜಾಗೃತಿ ಕಾರ್ಯಾಗಾರ

ಉಡುಪಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯಡ್ಕ ಡಿ.ಡಿ. ಉಪಾಧ್ಯಾಯ ಮದ್ಯವರ್ಜನ ಕೇಂದ್ರ ರಾಮನಗರ, ಜಿಲ್ಲಾ ಮಕ್ಕಳ ರಕ್ಷಣಾ ಕೇಂದ್ರ ಹಾಗೂ ಶಾಲಾ ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಜಾಗೃತಿ ಆಂದೋಲನವನ್ನು ಹಿರಿಯಡ್ಕದ ವೀರಭದ್ರ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಆಯೋಜಿಸಲಾಯಿತು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.

ಮಕ್ಕಳ ರಕ್ಷಣೆ ಕುರಿತು ಉಡುಪಿಯ ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆ‌ರ್ ಮಾಹಿತಿ ನೀಡಿದರು. ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಪ್ರಥಮ ಡಿ.ಡಿ.ಉಪಾಧ್ಯಾಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾದ ಉಡುಪಿಯ ನಿವೃತ್ತ ಉಪನ್ಯಾಸಕ ಲಕ್ಷ್ಮಿ ಜನಾರ್ಧನ ಭಟ್ ಇವರಿಗೆ ಮಣಿಪಾಲ ಮಾಹೆ ವಿವಿಯ ಉಪ ಕುಲಪತಿ ಡಾ. ಎಂ.ಡಿ. ವೆಂಕಟೇಶ್ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಬಿಇಓ ಡಾ.ಯಲ್ಲಮ್ಮ ಡಿ.ಡಿ.ಉಪಾಧ್ಯಾಯ ಆರೋಗ್ಯ ಕೇಂದ್ರದ ಕಾರ್ಯದರ್ಶಿ ಡಿ. ಸುಜಾತ ಉಪಸ್ಥಿತರಿದ್ದರು.

Related posts

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ