ಬಿ.ಆರ್.ಕೆ. ಆಡಳಿತ ನಿರ್ದೇಶಕ ರಮಾನಾಥ ಕಾಮತ್ ವಿಧಿವಶ

ಕಾರ್ಕಳ : ಕಾರ್ಕಳ ಜೋಡುರಸ್ತೆಯ ಬಿ.ಆರ್.ಕೆ ಉದ್ಯಮದ ಆಡಳಿತ ನಿರ್ದೇಶಕರಾಗಿದ್ದ ಬೋಳ ರಮಾನಾಥ ಕಾಮತ್ (82) ಅವರು ಇಂದು ಬೆಳಗ್ಗೆ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಉದ್ಯಮ ಕ್ಷೇತ್ರದ ಸಾಧನೆಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಯನ್ನು ಪಡೆದಿದ್ದ ರಮಾನಾಥ ಕಾಮತ್ ಅವರು ಯಕ್ಷಗಾನ ಕಲಾ ಸಮಿತಿಯ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ರಮಾನಾಥ ಕಾಮತ್‌ ಅವರ ನಿಧನಕ್ಕೆ ಕಾರ್ಕಳ ಶಾಸಕ ವಿ ಸುನಿಲ್‌ ಕುಮಾರ್‌ ಸಂತಾಪ :

ರಮಾನಾಥ ಕಾಮತ್ ಅವರು ಉದ್ಯಮ ಕ್ಷೇತ್ರದ ಜೊತೆಗೆ ಶ್ರೀ ವೆಂಕಟರಮಣ ಯಕ್ಷಗಾನ ಕಲಾ ಸಮಿತಿಯ ಸಂಚಾಲಕರಾಗಿ ಧಾರ್ಮಿಕ ಹಾಗೂ ಶೈಕ್ಷಣಿಕ ಸೇರಿದಂತೆ ಸಮಾಜಮುಖಿ ಚಟುವಟಿಕೆಗಳಿಗೆ ಅಪಾರ ಕೊಡುಗೆ ನೀಡಿದ್ದರು. ತಮ್ಮ ಸಂಸ್ಥೆಗಳಲ್ಲಿ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆಯಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಭಗವಂತನು ಅವರ ಕುಟುಂಬ ಹಾಗೂ ಬಂಧು-ಮಿತ್ರರಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಸುನಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ