ಯುವವಾಹಿನಿ ಸಂಸ್ಥೆಯ ‘ವಿಶುಕುಮಾರ್ ಪ್ರಶಸ್ತಿ’ಗೆ ಬಾಬು ಶಿವ ಪೂಜಾರಿ ಆಯ್ಕೆ

ಮಂಗಳೂರು : ಯುವವಾಹಿನಿ ಸಂಸ್ಥೆಯಿಂದ ಕೊಡಮಾಡುವ ‘ವಿಶುಕುಮಾರ್ ಪ್ರಶಸ್ತಿ’ಗೆ ಈ ಬಾರಿ ಪತ್ರಿಕಾ ಸಂಪಾದಕ, ಸಾಹಿತಿ, ಸಂಶೋಧಕ, ಬಾಬು ಶಿವ ಪೂಜಾರಿ ಆಯ್ಕೆಯಾಗಿದ್ದಾರೆ.

ಕಾದಂಬರಿಕಾರ, ಕತೆಗಾರ, ನಾಟಕಕಾರ, ರಂಗನಟ, ರಂಗ ನಿರ್ದೇಶಕ, ಚಲನಚಿತ್ರ ನಿರ್ದೇಶಕ, ಪತ್ರಕರ್ತ, ಅಂಕಣಕಾರ, ಸಂಘಟಕ ವಿಶು ಕುಮಾರ್ ಸ್ಮರಣಾರ್ಥ ಯುವವಾಹಿನಿ ಸಂಸ್ಥೆಯು ಕಳೆದ 20 ವರ್ಷಗಳಿಂದ “ವಿಶುಕುಮಾರ್ ಪ್ರಶಸ್ತಿ” ನೀಡುತ್ತಾ ಬಂದಿದೆ. ಈ ಸಾಲಿನ ಪ್ರಶಸ್ತಿಗೆ ಬಿ.ಎಂ. ರೋಹಿಣಿ, ಮುದ್ದು ಮೂಡುಬೆಳ್ಳೆ, ಡಾ| ಪ್ರಭಾಕರ ನೀರುಮಾರ್ಗ, ಡಾ| ಯೋಗೀಶ್ ಕೈರೋಡಿ, ಪ್ರೊ. ಶಶಿಲೇಖಾ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಆಯ್ಕೆಯನ್ನು ನಡೆಸಿದೆ.

ನವೆಂಬರ್ 10ರಂದು ಉರ್ವ ಸ್ಟೋರ್‌ನ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಯುವವಾಹಿನಿ ಸಂಸ್ಥೆಯ ವಿಶುಕುಮಾ‌ರ್ ದತ್ತಿ ನಿಧಿ ಸಮಿತಿಯ ಸಂಚಾಲಕ ಸುರೇಶ್ ಪೂಜಾರಿ ಹಾಗೂ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್‌ ಕೆ. ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ