ಹೆಬ್ರಿ ನಾಡ್ಪಾಲು ಗ್ರಾಮದಲ್ಲಿ ಕಾಣಿಸಿಕೊಂಡ ಮರಿ ಆನೆ; ಬೆಚ್ಚಿಬಿದ್ದ ಗ್ರಾಮಸ್ಥರು

ಉಡುಪಿ : ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತ್ರೋ ರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು ಜನವಸತಿ ಪ್ರದೇಶಕ್ಕೆ ಬಂದಿದ್ದು, ಸ್ಥಳೀಯ ಗ್ರಾಮಸ್ಥರ ಗದ್ದೆಗಳಲ್ಲಿ ದಾಂಧಲೆ ನಡೆಸಿದೆ.

ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಸ್ಥಳದಿಂದ ಓಡಿಸಿದರು.

ಪರಿಸರದ ನಾಲ್ಕಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಲೆದಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಸುವ ಮೂಲಕ ಆನೆಯನ್ನು ಸೆರೆ ಹಿಡಿಯಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ‌.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !