ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಜು.9) ದ.ಕ ಜಿಲ್ಲೆಯ ಶಾಲೆ, ಪಿಯುಗೆ ರಜೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜುಲೈ 9 ರಂದು ರಜೆಯನ್ನು ಘೋಷಿಸಿ‌ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು 9ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

Related posts

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಫೆಬ್ರವರಿ 20ರಂದು ಲಿಂಫೆಡೆಮಾ (ದುಗ್ಧರಸ ವ್ಯವಸ್ಥೆಯಿಂದ ಉಂಟಾಗುವ ಊತ) ತಪಾಸಣಾ ಶಿಬಿರದ ಆಯೋಜನೆ