ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. : ಬೀಳ್ಕೊಡುಗೆ ಕಾರ್ಯಕ್ರಮ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಶಾಖಾ ವ್ಯವಸ್ಥಾಪಕರಾದ ನಯನಾ ಆಶಾಮಣಿ, ದಾಮೋದರ್, ಶೆರ್ಲಿನ್ ಕರ್ಕಡ ಹಾಗೂ ಸಿಬ್ಬಂದಿ ರವಿ ಬಿ ಇವರ ಬೀಳ್ಕೊಡುಗೆ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಜರಗಿತು.

ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಸಮ್ಮುಖದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನೆರವೇರಿತು.

ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ , ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ