ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ : ವಿಶ್ವ ಯೋಗ ದಿನಾಚರಣೆ

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ವತಿಯಿಂದ ಇಂದು ವಿಶ್ವ ಯೋಗ ದಿನಾಚರಣೆಯನ್ನು ಜಗನ್ನಾಥ ಸಭಾಭವನದಲ್ಲಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯಕರ ಶೆಟ್ಟಿ ಇಂದ್ರಾಳಿ‌ಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ಲಿಸ್ ಯೋಗ ತರಬೇತಿ ಕೇಂದ್ರದ ತರಬೇತುದಾರರಾದ ಶ್ರೀಮತಿ ಸುಮನ ಶ್ರೀನಿವಾಸ್ ಯೋಗ ತರಬೇತಿಯನ್ನು ನಡೆಸಿಕೊಟ್ಟರು.

ಯೋಗದಿಂದ ಅರೋಗ್ಯ ರಕ್ಷಣೆ ಕುರಿತು ಮಾಹಿತಿ ನೀಡಿದರು. ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರತಿಮ ವಿ. ಎಸ್ ಇವರು ವಿವಿಧ ಬಗೆಯ ಯೋಗ ಪ್ರತ್ಯಕ್ಷತೆಯನ್ನು ನೀಡಿ ಸಹಕರಿಸಿದರು.

ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ವಿ. ಶೇರಿಗಾರ್, ನಿರ್ದೇಶಕರಾದ ಎಲ್ ಉಮಾನಾಥ್, ಶ್ರೀಮತಿ ಜಯ ಶೆಟ್ಟಿ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್, ಲೆಕ್ಕಿಗರಾದ ಶ್ರೀ ಅಶ್ವಿನಿ ಕುಮಾರ್ ಹಾಗೂ ಎಲ್ಲಾ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತು ದೈನಿಕ ಠೇವಣಿ ಸಂಗ್ರಹಾಕರು, ಉಪಸ್ಥಿತರಿದ್ದರು. ಮಲ್ಪೆ ಶಾಖಾ ವ್ಯವಸ್ಥಾಪಕರಾದ ಶ್ರೀ ನವೀನ್ ಕೆ ಯವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ