ಅಜೆಕಾರು ಕೊಲೆ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ಅಜೆಕಾರು : ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ.

ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ಜಾಮೀನು ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 4ರಂದು ದಿನಾಂಕ ನಿಗದಿ ಪಡಿಸಿ ನ್ಯಾಯಾಲಯ ಆದೇಶ ನೀಡಿದೆ. ಅಂದು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ(44) ಎಂಬವರನ್ನು ಅವರ ಪತ್ನಿ ಪ್ರತಿಮಾ(36) ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ