ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಸ್ವೀಕರಿಸಿ ಸಿಕ್ಕಿಬಿದ್ದ ಅಧಿಕಾರಿಗಳಿಗೆ ಜಾಮೀನು ನಿರಾಕರಣೆ.!!

ಮುಲ್ಕಿ : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ‌ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ‌ಯರ್ ಎಂಜಿನಿಯರ್ ನಾಗ‌ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಆರೋಪಿಗಳು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್. ರವರು ವಿಚಾರಣೆ ನಡೆಸಿದ್ದು ನ್ಯಾಯಾಲಯ ಆರೋಪಿತರಿಗೆ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಂದುವರಿದಿದೆ.

ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ